Flash News
Wednesday, August 26, 2026
Logo Flash News
Wednesday, August 26, 2026
Logo
ಕೇಣಿ ವಾಣಿಜ್ಯ ಬಂದರು ವಿರೋಧಿಸಿ ಅನಿರ್ದಿಷ್ಟಾವಧಿ ಧರಣಿಗೆ ಚಾಲನೆ; ಸ್ವಾತಂತ್ರ್ಯ ಸಂಗ್ರಾಮ ಭವನದ ಆವರಣದಲ್ಲಿ ಬೃಹತ್ ಪ್ರಮಾಣದಲ್ಲಿ ಜಮಾವಣೆಗೊಂಡ ಜನರು

ಕೇಣಿ ವಾಣಿಜ್ಯ ಬಂದರು ವಿರೋಧಿಸಿ ಅನಿರ್ದಿಷ್ಟಾವಧಿ ಧರಣಿಗೆ ಚಾಲನೆ; ಸ್ವಾತಂತ್ರ್ಯ ಸಂಗ್ರಾಮ ಭವನದ ಆವರಣದಲ್ಲಿ ಬೃಹತ್ ಪ್ರಮಾಣದಲ್ಲಿ ಜಮಾವಣೆಗೊಂಡ ಜನರು

November 12, 2025   |   Flash News

ಅಂಕೋಲಾ: ಒಂದು ವರ್ಷದಿಂದ ನಿರಂತರವಾಗಿ ಕೇಣೆ ವಾಣಿಜ್ಯ ಬಂದರು ನಿರ್ಮಾಣ ವಿರೋಧಿಸಿ ಹೋರಾಟ ಸಮಿತಿಯಿಂದ ಪ್ರತಿಭಟನೆ ನಡೆಯುತ್ತಿದ್ದು ಮುಂದುವರೆದ ಭಾಗವಾಗಿ ಬುಧವಾರದಿಂದ ಅಂಕೋಲಾ ಮತ್ತು ಉತ್ತರ ಕನ್ನಡ ಜಿಲ್ಲೆಯನ್ನು ಉಳಿಸಿ, ಬೃಹತ್ ಯೋಜನೆಗಳಿಗೆ ಬಲಿಯಾಗುವುದನ್ನು ತಪ್ಪಿಸಿ ಎನ್ನುವ ಧ್ಯೇಯದೊಂದಿಗೆ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹಕ್ಕೆ ಚಾಲನೆ ದೊರೆತಿದೆ. ಪಟ್ಟಣದ ಸ್ವಾತಂತ್ರ್ಯ ಸಂಗ್ರಾಮ ಭವನದ ಗಾಂಧಿ ಮೈದಾನದಲ್ಲಿ ನೂರಾರು ಮಹಿಳೆಯರು ಸೇರಿದಂತೆ ಬೃಹತ್ ಪ್ರಮಾಣದಲ್ಲಿ ಜನರು ಜಮಾವನೆಗೊಂಡು ಶಾಂತಿಯುತ ಹೋರಾಟಕ್ಕೆ ಮುಂದಾಗಿದ್ದಾರೆ. ಸ್ವಾತಂತ್ರ್ಯ ಸಂಗ್ರಾಮದ ಭವನದಲ್ಲಿ ಅಗಸ್ಟ್ 22ರಂದು ಸಾರ್ವಜನಿಕ ಆಹವಾಲು ಸಭೆ ನಡೆದಿದ್ದು ಜಿಲ್ಲೆಯಲ್ಲಿ ದಾಖಲೆ ಎನ್ನುವಂತೆ ಸಾವಿರಾರು ಸಾರ್ವಜನಿಕರು ಯೋಜನೆಯನ್ನು ವಿರೋಧಿಸಿದ್ದರು. ಅಲ್ಲದೇ ಒಂದು ವರ್ಷದಿಂದ ನಿರಂತರ ಹೋರಾಟಗಳನ್ನು ಮಾಡುತ್ತಾ ಕೇಂದ್ರ ಸರ್ಕಾರದವರೆಗೆ ಯೋಜನೆ ಕೈ ಬಿಡುವಂತೆ ಮನವಿ ಸಲ್ಲಿಸಿದ್ದರು. ಆದರೆ ಸರ್ಕಾರ ಈ ಕುರಿತು ಚಿಂತಿಸಿ ಸಾರ್ವಜನಿಕರ ಅಭ್ಯುದಯಕ್ಕೆ ತೀರ್ಮಾನ ಕೈಗೊಳ್ಳದಿರುವ ಕುರಿತು ಹಾಗೂ ವಾಣಿಜ್ಯ ಬಂದರು ನಿರ್ಮಾಣ ಕೈಬಿಡುವ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿದ ಹಿನ್ನೆಲೆ ಅನಿರ್ದಿಷ್ಟಾವಧಿ ಧರಣಿಗೆ ಮುಂದಾಗಿದ್ದೇವೆ ಎನ್ನುವುದು ಹೋರಾಟ ಸಮಿತಿಯ ಪ್ರಮುಖರ ಅಭಿಪ್ರಾಯವಾಗಿದೆ. ಬುಧವಾರ ಮುಂಜಾನೆಯಿಂದಲೇ ಬೃಹತ್ ಪ್ರಮಾಣದ ಸಾರ್ವಜನಿಕರು ಸೇರುತ್ತಿರುವುದನ್ನು ಕಂಡು ಪೊಲೀಸರು ಬಿಗಿ ಬಂದೋಬಸ್ತ್ ಕೈಗೊಂಡಿದ್ದಾರೆ. ಸ್ವತಂತ್ರ ಸಂಗ್ರಾಮ ಭವನದ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಜೈ ವೃತ್ತದ ಬಳಿ ಧರಣಿ ಮುಂದುವರೆಯಲಿದೆ.

 

 

Recent Flash News
Logo

ಜನಮಾಧ್ಯಮ ಕನ್ನಡದ ನಿಖರ ಸುದ್ದಿ ಮತ್ತು ತಾಜಾ ಮಾಹಿತಿಯ ವಿಶ್ವಾಸಾರ್ಹ ವೇದಿಕೆ. ಇಲ್ಲಿ ರಾಜಕೀಯ, ಸಾಮಾಜಿಕ, ಸಾಂಸ್ಕೃತಿಕ ಬೆಳವಣಿಗೆಗಳೊಂದಿಗೆ ಆರ್ಥಿಕ, ಶೈಕ್ಷಣಿಕ ಮತ್ತು ತಂತ್ರಜ್ಞಾನ ಕ್ಷೇತ್ರಗಳ ವಿಶ್ಲೇಷಿತ ಸುದ್ದಿಗಳನ್ನು ಪಡೆಯಬಹುದು. ಜನರಿಗಾಗಿ ಜನರಿಂದ ನಿರ್ಮಿತವಾದ ಈ ಮಾಧ್ಯಮವು ನಿಖರತೆ, ಪಾರದರ್ಶಕತೆ ಮತ್ತು ತ್ವರಿತ ಮಾಹಿತಿ ನೀಡುವುದರಲ್ಲಿ ತನ್ನ ವಿಶೇಷತೆ ಹೊಂದಿದೆ. ಕನ್ನಡ ಸುದ್ದಿಯನ್ನು ನಿಜವಾದ ಅರ್ಥದಲ್ಲಿ ಅನುಭವಿಸಲು ಮತ್ತು ನವೀಕರಿಸಲ್ಪಟ್ಟ ವರದಿಗಳನ್ನು ತಿಳಿದುಕೊಳ್ಳಲು ಜನಮಾಧ್ಯಮ ನಿಮ್ಮ ನಂಬಲರ್ಹ ಮೂಲ.

Tags

National Crime State Flash News Ankola

© 2026 ಜನಮಾಧ್ಯಮ.. All Rights Reserved.