Flash News
Saturday, February 14, 2026
Logo Flash News
Saturday, February 14, 2026
Logo
ಖಡಕ್‌ ಪಿಎಸ್ ಐ ಖಾದರ್‌ ಭಾಷಾ ವರ್ಗಾವಣೆ

ಖಡಕ್‌ ಪಿಎಸ್ ಐ ಖಾದರ್‌ ಭಾಷಾ ವರ್ಗಾವಣೆ

January 13, 2026   |   Flash News

ಗೋಕರ್ಣ: ಗೋಕರ್ಣ ಪೊಲೀಸ್ ಠಾಣೆಯಲ್ಲಿ ಕಳೆದ ಎರಡು ವರ್ಷಗಳಿಂದ ಕಾರ್ಯ ನಿರ್ವಹಿಸುತಿದ್ದ ಪಿಎಸ್ಐ ಖಾದರ ಭಾಷಾ ಅವರು ಕುಮಟಾ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದಾರೆ. ಭಾಷಾ ಅವರು ಗೋಕರ್ಣದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವಾಗ ಅನೇಕ ಪ್ರಕರಣಗಳನ್ನು ಭೇದಿಸಿ ಒಳ್ಳೆಯ ಹೆಸರು ಪಡೆದಿದ್ದರು. ಮಾದಕ ದ್ರವ್ಯ, ಮಟ್ಕಾದಂತಹ ಕಾನೂನು ಬಾಹಿರ ಚಟುವಟಿಕೆಗಳ ಕಡಿವಾಣ ಹಾಗೂ ಅನೇಕ ಅಪರಾಧಿಕ ಚಟುವಟಿಕೆಗಳನ್ನು ಪತ್ತೆಹಚ್ಚಿ ಆರೋಪಿಗಳನ್ನು ವಶಕ್ಕೆ ಪಡೆಯುವಲ್ಲಿ ಮಹತ್ತರ ಪಾತ್ರವಹಿಸಿದ್ದರು. ಸಮಾಜಮುಖಿಯಾದರೂ ಕೆಲವೊಮ್ಮೆ ವಿವಾದಗಳಿಗೆ ಸಿಲಿಕಿದ್ದರು. ಆದರೂ ಸ್ಥಳಿಯ ಜನರಿಗೆ ಸ್ಪಂದಿಸುವ ಮೂಲಕ ಗಮನ ಸೆಳೆದು, ಕಾನೂನು ಬಾಹಿರ ಚಟುವಟಿಕೆ ನಡೆಸುವವರಿಗೆ ಖಡಕ್‌ ಅಧಿಕಾರಿ ಎನಿಸಿದ್ದರು.

Recent Flash News
Logo

ಜನಮಾಧ್ಯಮ ಕನ್ನಡದ ನಿಖರ ಸುದ್ದಿ ಮತ್ತು ತಾಜಾ ಮಾಹಿತಿಯ ವಿಶ್ವಾಸಾರ್ಹ ವೇದಿಕೆ. ಇಲ್ಲಿ ರಾಜಕೀಯ, ಸಾಮಾಜಿಕ, ಸಾಂಸ್ಕೃತಿಕ ಬೆಳವಣಿಗೆಗಳೊಂದಿಗೆ ಆರ್ಥಿಕ, ಶೈಕ್ಷಣಿಕ ಮತ್ತು ತಂತ್ರಜ್ಞಾನ ಕ್ಷೇತ್ರಗಳ ವಿಶ್ಲೇಷಿತ ಸುದ್ದಿಗಳನ್ನು ಪಡೆಯಬಹುದು. ಜನರಿಗಾಗಿ ಜನರಿಂದ ನಿರ್ಮಿತವಾದ ಈ ಮಾಧ್ಯಮವು ನಿಖರತೆ, ಪಾರದರ್ಶಕತೆ ಮತ್ತು ತ್ವರಿತ ಮಾಹಿತಿ ನೀಡುವುದರಲ್ಲಿ ತನ್ನ ವಿಶೇಷತೆ ಹೊಂದಿದೆ. ಕನ್ನಡ ಸುದ್ದಿಯನ್ನು ನಿಜವಾದ ಅರ್ಥದಲ್ಲಿ ಅನುಭವಿಸಲು ಮತ್ತು ನವೀಕರಿಸಲ್ಪಟ್ಟ ವರದಿಗಳನ್ನು ತಿಳಿದುಕೊಳ್ಳಲು ಜನಮಾಧ್ಯಮ ನಿಮ್ಮ ನಂಬಲರ್ಹ ಮೂಲ.

Tags

National Crime State Flash News Ankola

© 2026 ಜನಮಾಧ್ಯಮ.. All Rights Reserved.