Flash News
Saturday, May 16, 2026
Logo Flash News
Saturday, May 16, 2026
Logo
ಶ್ರೀಮಾರಿಕಾಂಬಾ ಜಾತ್ರೆಗೆ ಚಾಲನೆ; ರಥಾರೂಢ ಮಾರಿಕಾಂಬೆ ದರ್ಶನ ಪಡೆದ ಭಕ್ತರು

ಶ್ರೀಮಾರಿಕಾಂಬಾ ಜಾತ್ರೆಗೆ ಚಾಲನೆ; ರಥಾರೂಢ ಮಾರಿಕಾಂಬೆ ದರ್ಶನ ಪಡೆದ ಭಕ್ತರು

February 25, 2026   |   Flash News

ಶಿರಸಿ: ದಕ್ಷಿಣ ಭಾರತದ ಸುಪ್ರಸಿದ್ಧ ಶ್ರೀಮಾರಿಕಾಂಬಾ ಜಾತ್ರೆಗೆ ಇಂದು ಭಕ್ತಿಭಾವಪೂರ್ಣವಾಗಿ ಚಾಲನೆ ದೊರಕಿತು. ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ನಡೆಯುತ್ತಿರುವ ಈ ಮಹಾ ಜಾತ್ರೆಯ ಅಂಗವಾಗಿ ಇಂದು ಮುಂಜಾನೆ 7.27 ಗಂಟೆಗೆ ಶ್ರೀ ಮಾರಿಕಾಂಬಾ ದೇವಿ ರಥಾರೂಢಳಾಗಿ ಸಾವಿರಾರು ಭಕ್ತರಿಗೆ ದರ್ಶನ ನೀಡಿದಳು.

ನಿನ್ನೆ ರಾತ್ರಿಯಿಂದಲೇ ಜಾತ್ರೆಯ ವಿಧಿವಿಧಾನಗಳು ಆರಂಭಗೊಂಡಿದ್ದು, ರಾತ್ರಿ ಭಕ್ತಿಭಾವದಿಂದ ಶ್ರೀ ದೇವಿಯ ಕಲ್ಯಾಣೋತ್ಸವ ನೆರವೇರಿತು. ಭಜನೆ, ಮಂಗಳವಾದ್ಯಗಳ ನಡುವೆ ನಡೆದ ಈ ಕಾರ್ಯಕ್ರಮದಲ್ಲಿ ಅಪಾರ ಸಂಖ್ಯೆಯಲ್ಲಿ ಭಕ್ತರು ಭಾಗವಹಿಸಿದ್ದರು. ಇಂದು ಬೆಳಗ್ಗೆ ಭವ್ಯ ಮೆರವಣಿಗೆಯೊಂದಿಗೆ ದೇವಿಯನ್ನು ರಥಾರೋಹಣ ಮಾಡಿಸಲಾಯಿತು. ರಥಾರೂಢಳಾಗಿ ಭಕ್ತರಿಗೆ ದರ್ಶನ ನೀಡುತ್ತಿರುವ ದೇವಿಯನ್ನು ನೋಡಲು ಅಪಾರ ಜನಸ್ತೋಮ ಕಣ್ತುಂಬಿಕೊಳ್ಳುತ್ತಿದೆ. ಮೆರವಣಿಗೆಯಲ್ಲಿ ಸಾವಿರಾರು ಭಕ್ತರು ಭಾಗವಹಿಸಿ ಭಕ್ತಿಯ ಪರಾಕಾಷ್ಠತೆ ಮೆರೆದರು.

Recent Flash News
Logo

ಜನಮಾಧ್ಯಮ ಕನ್ನಡದ ನಿಖರ ಸುದ್ದಿ ಮತ್ತು ತಾಜಾ ಮಾಹಿತಿಯ ವಿಶ್ವಾಸಾರ್ಹ ವೇದಿಕೆ. ಇಲ್ಲಿ ರಾಜಕೀಯ, ಸಾಮಾಜಿಕ, ಸಾಂಸ್ಕೃತಿಕ ಬೆಳವಣಿಗೆಗಳೊಂದಿಗೆ ಆರ್ಥಿಕ, ಶೈಕ್ಷಣಿಕ ಮತ್ತು ತಂತ್ರಜ್ಞಾನ ಕ್ಷೇತ್ರಗಳ ವಿಶ್ಲೇಷಿತ ಸುದ್ದಿಗಳನ್ನು ಪಡೆಯಬಹುದು. ಜನರಿಗಾಗಿ ಜನರಿಂದ ನಿರ್ಮಿತವಾದ ಈ ಮಾಧ್ಯಮವು ನಿಖರತೆ, ಪಾರದರ್ಶಕತೆ ಮತ್ತು ತ್ವರಿತ ಮಾಹಿತಿ ನೀಡುವುದರಲ್ಲಿ ತನ್ನ ವಿಶೇಷತೆ ಹೊಂದಿದೆ. ಕನ್ನಡ ಸುದ್ದಿಯನ್ನು ನಿಜವಾದ ಅರ್ಥದಲ್ಲಿ ಅನುಭವಿಸಲು ಮತ್ತು ನವೀಕರಿಸಲ್ಪಟ್ಟ ವರದಿಗಳನ್ನು ತಿಳಿದುಕೊಳ್ಳಲು ಜನಮಾಧ್ಯಮ ನಿಮ್ಮ ನಂಬಲರ್ಹ ಮೂಲ.

Tags

National Crime State Flash News Ankola

© 2026 ಜನಮಾಧ್ಯಮ.. All Rights Reserved.