Flash News
Saturday, May 16, 2026
Logo Flash News
Saturday, May 16, 2026
Logo
ಮಧ್ಯರಾತ್ರಿ ಕಾರಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

ಮಧ್ಯರಾತ್ರಿ ಕಾರಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

March 09, 2026   |   Flash News

ಭಟ್ಕಳ: ರಾತ್ರೋರಾತ್ರಿ ರಸ್ತೆ ಬದಿಯಲ್ಲಿ ನಿಲ್ಲಿಸಿದ ಕಾರಿಗೆ ಬೆಂಕಿ ಹಚ್ಚುವ ಮೂಲಕ ದುಷ್ಕರ್ಮಿಗಳು ದುಷ್ಕೃತ್ಯ ಮೆರೆದಿದ್ದಾರೆ.ತಾಲ್ಲೂಕಿನ ಭಟ್ಕಳದ ಕಟಗಾರಕೊಪ್ಪಾ ನಿವಾಸಿ ತುಳಸಿದಾಸ ಅಣ್ಣಪ್ಪ ನಾಯ್ಕ ಅವರ ಕಾರಿಗೆ ಬೆಂಕಿ ಹಚ್ಚಿದ್ದು ಘಟನೆಯಲ್ಲಿ ಕಾರು ಸಂಪೂರ್ಣವಾಗಿ ಸುಟ್ಟು ಹಾನಿಯಾಗಿದೆ. ತುಳಸಿದಾಸ ತಮ್ಮ ಮಾರುತಿ ಸುಜುಕಿ ಕಂಪನಿಯ ಬ್ರೀಜಾ ಕಾರನ್ನು ಶಿರಾಲಿ ಗ್ರಾಮದ ಕೋಟೆ ಬಾಗಿಲು ರಸ್ತೆಯಲ್ಲಿ ನಿಲ್ಲಿಸಿದ್ದರು. ಮಧ್ಯರಾತ್ರಿಗೆ ಯಾರೋ ದುಷ್ಕರ್ಮಿಗಳು ಉದ್ದೇಶಪೂರ್ವಕವಾಗಿ ಕಾರಿಗೆ ಬೆಂಕಿ ಹಚ್ಚಿ ಹಾನಿ ಮಾಡಿದ್ದಾರೆ ಎಂದು ತುಳಸಿದಾಸ ದೂರಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

Recent Flash News
Logo

ಜನಮಾಧ್ಯಮ ಕನ್ನಡದ ನಿಖರ ಸುದ್ದಿ ಮತ್ತು ತಾಜಾ ಮಾಹಿತಿಯ ವಿಶ್ವಾಸಾರ್ಹ ವೇದಿಕೆ. ಇಲ್ಲಿ ರಾಜಕೀಯ, ಸಾಮಾಜಿಕ, ಸಾಂಸ್ಕೃತಿಕ ಬೆಳವಣಿಗೆಗಳೊಂದಿಗೆ ಆರ್ಥಿಕ, ಶೈಕ್ಷಣಿಕ ಮತ್ತು ತಂತ್ರಜ್ಞಾನ ಕ್ಷೇತ್ರಗಳ ವಿಶ್ಲೇಷಿತ ಸುದ್ದಿಗಳನ್ನು ಪಡೆಯಬಹುದು. ಜನರಿಗಾಗಿ ಜನರಿಂದ ನಿರ್ಮಿತವಾದ ಈ ಮಾಧ್ಯಮವು ನಿಖರತೆ, ಪಾರದರ್ಶಕತೆ ಮತ್ತು ತ್ವರಿತ ಮಾಹಿತಿ ನೀಡುವುದರಲ್ಲಿ ತನ್ನ ವಿಶೇಷತೆ ಹೊಂದಿದೆ. ಕನ್ನಡ ಸುದ್ದಿಯನ್ನು ನಿಜವಾದ ಅರ್ಥದಲ್ಲಿ ಅನುಭವಿಸಲು ಮತ್ತು ನವೀಕರಿಸಲ್ಪಟ್ಟ ವರದಿಗಳನ್ನು ತಿಳಿದುಕೊಳ್ಳಲು ಜನಮಾಧ್ಯಮ ನಿಮ್ಮ ನಂಬಲರ್ಹ ಮೂಲ.

Tags

National Crime State Flash News Ankola

© 2026 ಜನಮಾಧ್ಯಮ.. All Rights Reserved.