Flash News
Friday, July 17, 2026
Logo Flash News
Friday, July 17, 2026
Logo

ಕಾಡಿನಲ್ಲಿ ವ್ಯಕ್ತಿಯ ಶವ ಪತ್ತೆ; ಕೊಲೆ ಶಂಕೆ?

June 26, 2026   |   Flash News

ಶಿರಸಿ: ತಾಲೂಕಿನ ಶಿಂಗನಮನೆ ಗ್ರಾಮ ವ್ಯಾಪ್ತಿಯ ಕಾಡಿನಲ್ಲಿ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದ್ದು, ಮಾರಕಾಸ್ತ್ರಗಳಿಂದ ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಪರಮೇಶ್ವರ ತಿಮ್ಮ ನಾಯ್ಕ (32) ಮೃತ ವ್ಯಕ್ತಿಯಾಗಿದ್ದು, ಇಂದು ಬೆಳಗಿನ ಜಾವ ಶಿಂಗನಮನೆಯ ಕಾಡಿನಲ್ಲಿ ಶವ ಪತ್ತೆಯಾಗಿದೆ. ಮಾಹಿತಿಯಂತೆ, ನಿನ್ನೆ ಸಂಜೆ ಸುಮಾರು 7 ಗಂಟೆ ವೇಳೆಗೆ ಪರಮೇಶ್ವರ ಅವರಿಗೆ ಫೋನ್ ಕರೆ ಬಂದಿದ್ದು, ಬಳಿಕ ಅವರು ಮನೆಯಿಂದ ಹೊರಗಡೆ ತೆರಳಿದ್ದರು. ಆದರೆ ರಾತ್ರಿ ಮನೆಗೆ ಮರಳಿ ಬಾರದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಹುಡುಕಾಟ ಆರಂಭಿಸಿದ್ದರು. ಇಂದು ಬೆಳಿಗ್ಗೆ ಕಾಡಿನಲ್ಲಿ ಶವ ಕಂಡುಬಂದಿದ್ದು, ವಿಷಯ ತಿಳಿಯುತ್ತಿದ್ದಂತೆ ಶಿರಸಿ ಗ್ರಾಮೀಣ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಪ್ರಾಥಮಿಕ ಮಾಹಿತಿಯ ಪ್ರಕಾರ ಮಾರಕಾಸ್ತ್ರಗಳಿಂದ ಹತ್ಯೆ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ಮುಂದುವರಿಸಿದ್ದಾರೆ.

Recent Flash News
Logo

ಜನಮಾಧ್ಯಮ ಕನ್ನಡದ ನಿಖರ ಸುದ್ದಿ ಮತ್ತು ತಾಜಾ ಮಾಹಿತಿಯ ವಿಶ್ವಾಸಾರ್ಹ ವೇದಿಕೆ. ಇಲ್ಲಿ ರಾಜಕೀಯ, ಸಾಮಾಜಿಕ, ಸಾಂಸ್ಕೃತಿಕ ಬೆಳವಣಿಗೆಗಳೊಂದಿಗೆ ಆರ್ಥಿಕ, ಶೈಕ್ಷಣಿಕ ಮತ್ತು ತಂತ್ರಜ್ಞಾನ ಕ್ಷೇತ್ರಗಳ ವಿಶ್ಲೇಷಿತ ಸುದ್ದಿಗಳನ್ನು ಪಡೆಯಬಹುದು. ಜನರಿಗಾಗಿ ಜನರಿಂದ ನಿರ್ಮಿತವಾದ ಈ ಮಾಧ್ಯಮವು ನಿಖರತೆ, ಪಾರದರ್ಶಕತೆ ಮತ್ತು ತ್ವರಿತ ಮಾಹಿತಿ ನೀಡುವುದರಲ್ಲಿ ತನ್ನ ವಿಶೇಷತೆ ಹೊಂದಿದೆ. ಕನ್ನಡ ಸುದ್ದಿಯನ್ನು ನಿಜವಾದ ಅರ್ಥದಲ್ಲಿ ಅನುಭವಿಸಲು ಮತ್ತು ನವೀಕರಿಸಲ್ಪಟ್ಟ ವರದಿಗಳನ್ನು ತಿಳಿದುಕೊಳ್ಳಲು ಜನಮಾಧ್ಯಮ ನಿಮ್ಮ ನಂಬಲರ್ಹ ಮೂಲ.

Tags

National Crime State Flash News Ankola

© 2026 ಜನಮಾಧ್ಯಮ.. All Rights Reserved.