Flash News
Friday, July 17, 2026
Logo Flash News
Friday, July 17, 2026
Logo
ಖಾಸಗಿ ಬಸ್ ಪಲ್ಟಿ; 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಖಾಸಗಿ ಬಸ್ ಪಲ್ಟಿ; 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

July 02, 2026   |   Flash News

ಅಂಕೋಲಾ: ರಾಷ್ಟ್ರೀಯ ಹೆದ್ದಾರಿ 66ರ ಅಂಕೋಲಾ–ಕಾರವಾರ ಮಾರ್ಗ ಮಧ್ಯೆ  ಹಾರವಾಡ ಕ್ರಾಸ್ ಸಮೀಪ ಮಂಗಳವಾರ ಬೆಳಿಗ್ಗೆ  ಖಾಸಗಿ ಟೂರಿಸ್ಟ್ ಬಸ್ ಪಲ್ಟಿಯಾಗಿದ್ದು 20ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡಿದ್ದಾರೆ ಎನ್ನಲಾಗಿದೆ. ಬೆಂಗಳೂರಿನಿಂದ ಕಾರವಾರದತ್ತ ತೆರಳುತ್ತಿದ್ದ ಬಸ್, ಅವರ್ಸಾ ಬಳಿಯ ಕಿರು ಸೇತುವೆಯ ತಗ್ಗು ಪ್ರದೇಶದ ಬಳಿ  ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಘಟನೆಯ ಬಳಿಕ ಸ್ಥಳೀಯರು ಹಾಗೂ ಇತರರು ತಕ್ಷಣ ನೆರವಿಗೆ ಧಾವಿಸಿದ್ದು, 1033 ಎನ್‌ಎಚ್‌ಎಐ ಅಂಬುಲೆನ್ಸ್ ಮೂಲಕ ಕೆಲ ಗಾಯಾಳುಗಳನ್ನು ಅಂಕೋಲಾ ತಾಲೂಕು ಆಸ್ಪತ್ರೆಗೆ ತುರ್ತು ಚಿಕಿತ್ಸೆಗೆ ಸಾಗಿಸಲಾಗಿದೆ. ಸಿಪಿಐ ಚಂದ್ರಶೇಖರ್ ಮಠಪತಿ ಹಾಗೂ ಪೊಲೀಸ್ ಸಿಬ್ಬಂದಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಕಾನೂನು ಕ್ರಮ ಮುಂದುವರಿಸಿದ್ದಾರೆ. ಅಪಘಾತಕ್ಕೆ ನಿಖರ ಕಾರಣ, ಗಾಯಾಳುಗಳ ಕುರಿತಂತೆ ಹೆಚ್ಚಿನ ಮತ್ತು  ಅಧಿಕೃತ ಮಾಹಿತಿ ತಿಳಿದು ಬರಬೇಕಿದೆ.

Recent Flash News
Logo

ಜನಮಾಧ್ಯಮ ಕನ್ನಡದ ನಿಖರ ಸುದ್ದಿ ಮತ್ತು ತಾಜಾ ಮಾಹಿತಿಯ ವಿಶ್ವಾಸಾರ್ಹ ವೇದಿಕೆ. ಇಲ್ಲಿ ರಾಜಕೀಯ, ಸಾಮಾಜಿಕ, ಸಾಂಸ್ಕೃತಿಕ ಬೆಳವಣಿಗೆಗಳೊಂದಿಗೆ ಆರ್ಥಿಕ, ಶೈಕ್ಷಣಿಕ ಮತ್ತು ತಂತ್ರಜ್ಞಾನ ಕ್ಷೇತ್ರಗಳ ವಿಶ್ಲೇಷಿತ ಸುದ್ದಿಗಳನ್ನು ಪಡೆಯಬಹುದು. ಜನರಿಗಾಗಿ ಜನರಿಂದ ನಿರ್ಮಿತವಾದ ಈ ಮಾಧ್ಯಮವು ನಿಖರತೆ, ಪಾರದರ್ಶಕತೆ ಮತ್ತು ತ್ವರಿತ ಮಾಹಿತಿ ನೀಡುವುದರಲ್ಲಿ ತನ್ನ ವಿಶೇಷತೆ ಹೊಂದಿದೆ. ಕನ್ನಡ ಸುದ್ದಿಯನ್ನು ನಿಜವಾದ ಅರ್ಥದಲ್ಲಿ ಅನುಭವಿಸಲು ಮತ್ತು ನವೀಕರಿಸಲ್ಪಟ್ಟ ವರದಿಗಳನ್ನು ತಿಳಿದುಕೊಳ್ಳಲು ಜನಮಾಧ್ಯಮ ನಿಮ್ಮ ನಂಬಲರ್ಹ ಮೂಲ.

Tags

National Crime State Flash News Ankola

© 2026 ಜನಮಾಧ್ಯಮ.. All Rights Reserved.