Flash News
Friday, July 17, 2026
Logo Flash News
Friday, July 17, 2026
Logo
ಸಚಿವ ಖಾದರ್ ಬೆಂಗಾವಲು ವಾಹನ ಅಪಘಾತ:  ಮಾನವೀಯತೆ ಮೆರೆದ ಖಾದರ್

ಸಚಿವ ಖಾದರ್ ಬೆಂಗಾವಲು ವಾಹನ ಅಪಘಾತ: ಮಾನವೀಯತೆ ಮೆರೆದ ಖಾದರ್

July 04, 2026   |   Flash News

ಅಂಕೋಲಾ: ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ ವ್ಯಾಪ್ತಿಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಉಸ್ತುವಾರಿ ಹಾಗೂ ಆರೋಗ್ಯ ಸಚಿವ ಯು.ಟಿ ಖಾದರ್ ಅವರ ಬೆಂಗಾವಲು ವಾಹನಕ್ಕೆ ಸ್ಕೂಟಿ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಗಾಯಾಳುವನ್ನು ತಾಲೂಕಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲು ನೆರವಾಗುವ ಮೂಲಕ ಸಚಿವ ಯು.ಟಿ ಖಾದರ್ ಮಾನವೀಯ ಮೆರೆದಿದ್ದಾರೆ. ಜಿಲ್ಲೆಗೆ ಪ್ರಗತಿ ಪರಿಶೀಲನೆ ಸಭೆಗೆ ಆಗಮಿಸಿದ ಸಚಿವರು ಕಾರವಾರದಿಂದ ಉಡುಪಿ ಕಡೆಗೆ ರಸ್ತೆ ಮಾರ್ಗವಾಗಿ ಪ್ರಯಾಣಿಸುತ್ತಿದ್ದು ಅವರಿಗೆ ಬೆಂಗಾವಲಾಗಿದ್ದ ಪೊಲೀಸ್ ವಾಹನಕ್ಕೆ ಇಲ್ಲಿನ ಅಲಗೇರಿಯ ಸಂದೀಪ ನಾಯಕ ಅವರು ಚಲಾಯಿಸುತ್ತಿದ್ದ ಸ್ಕೂಟಿ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಸಂದೀಪ ನಾಯಕ ಗಾಯಗೊಂಡಿದ್ದು ಘಟನೆ ನಡೆದ ತಕ್ಷಣವೇ ತಮ್ಮ ವಾಹನವನ್ನು ನಿಲ್ಲಿಸಿದ ಸಚಿವ ಯು.ಟಿ. ಖಾದರ್ ಆತನನ್ನು ಆಸ್ಪತ್ರೆಗೆ ಸಾಗಿಸುವಲ್ಲಿ ನೆರವಾಗುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

Recent Flash News
Logo

ಜನಮಾಧ್ಯಮ ಕನ್ನಡದ ನಿಖರ ಸುದ್ದಿ ಮತ್ತು ತಾಜಾ ಮಾಹಿತಿಯ ವಿಶ್ವಾಸಾರ್ಹ ವೇದಿಕೆ. ಇಲ್ಲಿ ರಾಜಕೀಯ, ಸಾಮಾಜಿಕ, ಸಾಂಸ್ಕೃತಿಕ ಬೆಳವಣಿಗೆಗಳೊಂದಿಗೆ ಆರ್ಥಿಕ, ಶೈಕ್ಷಣಿಕ ಮತ್ತು ತಂತ್ರಜ್ಞಾನ ಕ್ಷೇತ್ರಗಳ ವಿಶ್ಲೇಷಿತ ಸುದ್ದಿಗಳನ್ನು ಪಡೆಯಬಹುದು. ಜನರಿಗಾಗಿ ಜನರಿಂದ ನಿರ್ಮಿತವಾದ ಈ ಮಾಧ್ಯಮವು ನಿಖರತೆ, ಪಾರದರ್ಶಕತೆ ಮತ್ತು ತ್ವರಿತ ಮಾಹಿತಿ ನೀಡುವುದರಲ್ಲಿ ತನ್ನ ವಿಶೇಷತೆ ಹೊಂದಿದೆ. ಕನ್ನಡ ಸುದ್ದಿಯನ್ನು ನಿಜವಾದ ಅರ್ಥದಲ್ಲಿ ಅನುಭವಿಸಲು ಮತ್ತು ನವೀಕರಿಸಲ್ಪಟ್ಟ ವರದಿಗಳನ್ನು ತಿಳಿದುಕೊಳ್ಳಲು ಜನಮಾಧ್ಯಮ ನಿಮ್ಮ ನಂಬಲರ್ಹ ಮೂಲ.

Tags

National Crime State Flash News Ankola

© 2026 ಜನಮಾಧ್ಯಮ.. All Rights Reserved.