Flash News
Wednesday, October 28, 2026
Logo Flash News
Wednesday, October 28, 2026
Logo
ಸರ್ಕಲ್ ನಲ್ಲಿ ಸಂಚಾರಕ್ಕೆ ಅಡ್ಡಿ: ಸುಮೋಟೋ ಕೇಸ್ ದಾಖಲು

ಸರ್ಕಲ್ ನಲ್ಲಿ ಸಂಚಾರಕ್ಕೆ ಅಡ್ಡಿ: ಸುಮೋಟೋ ಕೇಸ್ ದಾಖಲು

October 26, 2026   |   Flash News

ಹೊನ್ನಾವರ: ಪಟ್ಟಣದ ಹೈವೆ ಸರ್ಕಲ್ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗಲಾಟೆ ಮಾಡಿ ಸಂಚಾರಕ್ಕೆ ಅಡ್ಡಿಯಾದವರ ಮೇಲೆ ಪೊಲೀಸರು ಸುಮೋಟೋ ಪ್ರಕರಣ ದಾಖಲಿಸಿಕೊಂಡಿದ್ದಾರೆ. 

ಇಲ್ಲಿನ ಮಣಿಕಂಠ ಕೃಷ್ಣ ಮೇಸ್ತಾ, ಆದರ್ಶ ಮೇಸ್ತಾ, ಪ್ರಶಾಂತ ಮೇಸ್ತಾ ಹಾಗೂ ಇತರರು ರವಿವಾರ ಸಂಜೆ ಹೈವೆ ಸರ್ಕಲ್ ಬಳಿ ಪ್ರವಾಸೋದ್ಯಮ ಇಲಾಖೆಯವರು ಶರಾವತಿ ಹಿನ್ನೀರಿನ ಬೋಟಿಂಗ್ ಟೋಕನ್ ನೀಡುವ ಸಾರ್ವಜನಿಕ ಸ್ಥಳದಲ್ಲಿ ಪರಸ್ಪರ ಬೈದಾಡಿಕೊಂಡು ಕೈಕೈ ಮಿಲಾಯಿಸಿದ್ದಾರೆ. ಗಲಾಟೆ ಮಾಡುತ್ತಾ ರಸ್ತೆ ಸಂಚಾರಕ್ಕೆ ಅಡಚಣೆ ಮಾಡಿ ಸಾರ್ವಜನಿಕ ಸ್ಥಳದಲ್ಲಿ ಶಾಂತತಾ ಭಂಗ ಮಾಡಿದ್ದಾರೆ ಎಂದು ಪೊಲೀಸರು ದೂರು ದಾಖಲಿಸಿದ್ದಾರೆ.

Recent Flash News
Logo

ಜನಮಾಧ್ಯಮ ಕನ್ನಡದ ನಿಖರ ಸುದ್ದಿ ಮತ್ತು ತಾಜಾ ಮಾಹಿತಿಯ ವಿಶ್ವಾಸಾರ್ಹ ವೇದಿಕೆ. ಇಲ್ಲಿ ರಾಜಕೀಯ, ಸಾಮಾಜಿಕ, ಸಾಂಸ್ಕೃತಿಕ ಬೆಳವಣಿಗೆಗಳೊಂದಿಗೆ ಆರ್ಥಿಕ, ಶೈಕ್ಷಣಿಕ ಮತ್ತು ತಂತ್ರಜ್ಞಾನ ಕ್ಷೇತ್ರಗಳ ವಿಶ್ಲೇಷಿತ ಸುದ್ದಿಗಳನ್ನು ಪಡೆಯಬಹುದು. ಜನರಿಗಾಗಿ ಜನರಿಂದ ನಿರ್ಮಿತವಾದ ಈ ಮಾಧ್ಯಮವು ನಿಖರತೆ, ಪಾರದರ್ಶಕತೆ ಮತ್ತು ತ್ವರಿತ ಮಾಹಿತಿ ನೀಡುವುದರಲ್ಲಿ ತನ್ನ ವಿಶೇಷತೆ ಹೊಂದಿದೆ. ಕನ್ನಡ ಸುದ್ದಿಯನ್ನು ನಿಜವಾದ ಅರ್ಥದಲ್ಲಿ ಅನುಭವಿಸಲು ಮತ್ತು ನವೀಕರಿಸಲ್ಪಟ್ಟ ವರದಿಗಳನ್ನು ತಿಳಿದುಕೊಳ್ಳಲು ಜನಮಾಧ್ಯಮ ನಿಮ್ಮ ನಂಬಲರ್ಹ ಮೂಲ.

Tags

National Crime State Flash News Ankola

© 2026 ಜನಮಾಧ್ಯಮ.. All Rights Reserved.