Flash News
Saturday, October 31, 2026
Logo Flash News
Saturday, October 31, 2026
Logo
ಉತ್ತರ ಕನ್ನಡ ಜಿಲ್ಲೆಯ ಪಾಲಿಗೆ ಮರೀಚಿಕೆಯಾದ ರಾಜ್ಯೋತ್ಸವ ಪ್ರಶಸ್ತಿ?

ಉತ್ತರ ಕನ್ನಡ ಜಿಲ್ಲೆಯ ಪಾಲಿಗೆ ಮರೀಚಿಕೆಯಾದ ರಾಜ್ಯೋತ್ಸವ ಪ್ರಶಸ್ತಿ?

October 30, 2026   |   Flash News

ಅಂಕೋಲಾ: ಈ ಬಾರಿಯ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯ ಪಟ್ಟಿಯನ್ನು ಅಧಿಕೃತವಾಗಿ ಪ್ರಕಟಿಸಲಾಗಿದ್ದು ಜಿಲ್ಲೆಯ ಪಾಲಿಗೆ ರಾಜ್ಯೋತ್ಸವ ಪ್ರಶಸ್ತಿ ಮರೀಚಿಕೆಯಾಗಿದೆ? ಎನ್ನುವ ಆಕ್ಷೇಪಗಳು ಕೇಳಿ ಬಂದಿವೆ. ಉತ್ತರ ಕನ್ನಡ ಜಿಲ್ಲೆಯಿಂದ ಆದರ್ಶ ಚಾರಿಟೇಬಲ್ ಟ್ರಸ್ಟ್ ನ ಜಿ.ಎಸ್ ಚಂದ್ರಶೇಖರ ಎನ್ನುವವರಿಗೆ ಸಮಾಜ ಸೇವಾ ಕ್ಷೇತ್ರದಲ್ಲಿ ಆಯ್ಕೆ ಮಾಡಲಾಗಿದೆ. ಆದರೆ ಜಿಲ್ಲೆಗೆ ಇವರು ಚಿರಪರಿಚಿತರಾಗದೆ ಉಡುಪಿ ಜಿಲ್ಲೆಯವರು ಎನ್ನುವ ಕೂಗು ಕೇಳಿಬಂದಿದೆ. 71 ಜನರನ್ನು ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಿದ್ದು ಪ್ರತಿ ಜಿಲ್ಲೆಯಿಂದ ತಲಾ ಇಬ್ಬರನ್ನು ಆಯ್ಕೆ ಮಾಡುವ ಅವಕಾಶವಿದ್ದರೂ ಉತ್ತರ ಕನ್ನಡ ಜಿಲ್ಲೆಯನ್ನು ಸಂಪೂರ್ಣವಾಗಿ ನಿರ್ಲಕ್ಷ ಮಾಡಲಾಗಿದೆ ಎಂದು ಸಾಮಾಜಿಕ ಜಾಲತಾಣಗಳ ಮೂಲಕ ಜಿಲ್ಲೆಯ ಪ್ರಜ್ಞಾವಂತರು ಆಕ್ರೋಶ ಅವರ ಹಾಕುತ್ತಿದ್ದಾರೆ. 

“ಉತ್ತರ ಕನ್ನಡ ಜಿಲ್ಲೆ ರಾಜ್ಯದಲ್ಲಿ ಎರಡನೆಯ ಅತಿ ದೊಡ್ಡ ಜಿಲ್ಲೆ. ಒಟ್ಟು 12 ತಾಲೂಕುಗಳನ್ನು ಒಳಗೊಂಡಿದೆ ಇಲ್ಲಿ ಅನೇಕ ಸಾಹಿತಿಗಳು, ಕಲಾವಿದರು, ಶಿಕ್ಷಣ ತಜ್ಞರು, ಸಮಾಜ ಸೇವಕರು,ಪತ್ರಕರ್ತರು ಇದ್ದಾರೆ, ಆದರೆ ಕರ್ನಾಟಕ ರಾಜ್ಯ ಸರ್ಕಾರಕ್ಕೆ ಇವರಾರು ಕಣ್ಣಿಗೆ ಬೀಳದಿರುವುದು ವಿಷಾದನೀಯ. ಈ ವರ್ಷ ಘೋಷಿಸಿರುವ 71 ರಾಜ್ಯ ಪ್ರಶಸ್ತಿಗಳಲ್ಲಿ ಉತ್ತರ ಕನ್ನಡ ಜಿಲ್ಲೆಯ ಹೆಸರಿನಲ್ಲಿ  ಆದರ್ಶ ಚಾರಿಟಬಲ್ ಟ್ರಸ್ಟ್  ನ  ಡಾ. ಚಂದ್ರಶೇಖರ ಅವರಿಗೆ ಪ್ರಶಸ್ತಿ ನೀಡಲಾಗಿದೆ. ಆದರೆ ಅವರು ಉತ್ತರ ಕನ್ನಡ ಜಿಲ್ಲೆಯವರೆ ಎಂಬುದು ಅನುಮಾನ. ವಿನಾಶಕಾರಿ ಅಭಿವೃದ್ಧಿ ಯೋಜನೆಗಳಿಗೆ ಉತ್ತರ ಕನ್ನಡವನ್ನು ಆಯ್ದುಕೊಳ್ಳುವ ಸರಕಾರಿ ಕಣ್ಣುಗಳಿಗೆ ಇಲ್ಲಿರುವ ಪ್ರತಿಭಾವಂತರಲ್ಲೂ ಗುರುತಿಸಲು ಸಾಧ್ಯವಾಗದೇ ಇರುವುದು ನಿಜಕ್ಕೂ ಅನ್ಯಾಯ. ಸರಕಾರದ ಈ ನಿರ್ಲಕ್ಷ್ಯವನ್ನು ಜಿಲ್ಲೆಯ ಜನ ಪಕ್ಷಾತೀತವಾಗಿ ಪ್ರಶ್ನಿಸಬೇಕಾದ ಅನಿವಾರ್ಯತೆ ಇದೆ”-  ಶ್ರೀಧರ ಬಿ.ನಾಯಕ.

Recent Flash News
Logo

ಜನಮಾಧ್ಯಮ ಕನ್ನಡದ ನಿಖರ ಸುದ್ದಿ ಮತ್ತು ತಾಜಾ ಮಾಹಿತಿಯ ವಿಶ್ವಾಸಾರ್ಹ ವೇದಿಕೆ. ಇಲ್ಲಿ ರಾಜಕೀಯ, ಸಾಮಾಜಿಕ, ಸಾಂಸ್ಕೃತಿಕ ಬೆಳವಣಿಗೆಗಳೊಂದಿಗೆ ಆರ್ಥಿಕ, ಶೈಕ್ಷಣಿಕ ಮತ್ತು ತಂತ್ರಜ್ಞಾನ ಕ್ಷೇತ್ರಗಳ ವಿಶ್ಲೇಷಿತ ಸುದ್ದಿಗಳನ್ನು ಪಡೆಯಬಹುದು. ಜನರಿಗಾಗಿ ಜನರಿಂದ ನಿರ್ಮಿತವಾದ ಈ ಮಾಧ್ಯಮವು ನಿಖರತೆ, ಪಾರದರ್ಶಕತೆ ಮತ್ತು ತ್ವರಿತ ಮಾಹಿತಿ ನೀಡುವುದರಲ್ಲಿ ತನ್ನ ವಿಶೇಷತೆ ಹೊಂದಿದೆ. ಕನ್ನಡ ಸುದ್ದಿಯನ್ನು ನಿಜವಾದ ಅರ್ಥದಲ್ಲಿ ಅನುಭವಿಸಲು ಮತ್ತು ನವೀಕರಿಸಲ್ಪಟ್ಟ ವರದಿಗಳನ್ನು ತಿಳಿದುಕೊಳ್ಳಲು ಜನಮಾಧ್ಯಮ ನಿಮ್ಮ ನಂಬಲರ್ಹ ಮೂಲ.

Tags

National Crime State Flash News Ankola

© 2026 ಜನಮಾಧ್ಯಮ.. All Rights Reserved.