ಅಂಕೋಲಾ: ತಾಲ್ಲೂಕಿನಲ್ಲಿ ಗುರುವಾರವೂ ಮಳೆಯ ಅಬ್ಬರ ಮುಂದುವರೆದಿದೆ. ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಹಿನ್ನಲೆ ಹಲವು ತಾಲ್ಲೂಕಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಮಳೆ ಮುಂದುವರೆದ ಕಾರಣ ಅಂಕೋಲಾ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ ಜುಲೈ 2ರಂದು ರಜೆ ಘೋಷಣೆ ಮಾಡಲಾಗಿದೆ. ಅತಿಯಾದ ಮಳೆಯ ಹಿನ್ನಲೆ ಮಕ್ಕಳ ಕಾಳಜಿಯ ದೃಷ್ಟಿಯಿಂದ ಮುಂಜಾಜಾಗೃತಾ ಕ್ರಮವಾಗಿ ತಾಲ್ಲೂಕು ಶಿಶು ಅಭಿವೃದ್ಧಿ ಅಧಿಕಾರಿ ಗುರುವಾರ ರಜೆ ಘೋಷಿಸಿದ್ದಾರೆ.